ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷಾಚರಣೆಗೆ ದೇಶವೇ ಸಜ್ಜಾಗುತ್ತಿದ್ದು, ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಕೂಡ ಸಂಭ್ರಮ ಮನೆ ಮಾಡಿದೆ.
ಈಗಾಗಲೇ ಕೇಂದ್ರ ವಿಭಾಗ ಪೊಲೀಸರು ಹೈಅಲರ್ಟ್ ಆಗಿದ್ದು,ನಗರದ ಎಲ್ಲಾ ವಿಭಾಗಗಳಲ್ಲಿ ಅಗತ್ಯ ಭದ್ರತಾ ಕ್ರಮಕ್ಕೆ ಪೊಲೀಸರಿಂದ ಸಿದ್ಧತೆ ನಡೆದಿದೆ.
ಕಳೆದ ವರ್ಷ ಸಂಭ್ರಮಾಚರಣೆ ವೇಳೆ ಗಲಾಟೆಯಾಗಿತ್ತು. ಈ ಬಾರಿ ಯಾವುದೇ ಅಹಿತರ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿರುವ ಪೊಲೀಸರು.ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ.
ಕಳೆದ ಬ್ರಿಗೇಡ್ ರಸ್ತೆಯಲ್ಲಿ ಕಪಲ್ಸ್‌ಗೆ ಸಮಸ್ಯೆಯಾಗಿತ್ತು.ಹೀಗಾಗಿ ಈ ಬಾರಿ ಕಪಲ್ಸ್ ಗೆ ಪ್ರತ್ಯೇಕ ಜಾಗದ ವ್ಯವಸ್ಥೆ ಮಾಡಿರುವ ಪೊಲೀಸರು. ಈ ಬಾರಿ ಹೊಸ ವರ್ಷಕ್ಕೆ ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿ ಕಪಲ್ಸ್ ಗಳಿಗೆ ಪ್ರತ್ಯೇಕವಾದ ಮಾರ್ಗ. ಪ್ರತ್ಯೇಕ ಜಾಗದ ವ್ಯವಸ್ಥೆ ಮಾಡಿ ಭದ್ರತೆ ವ್ಯವಸ್ಥೆ ನೀಡಲಾಗುತ್ತಿದೆ. ಕಪಲ್ಸ್ ಇರೋ ಕಡೆ ಬೇರೆ ಯಾರಿಗೂ ನಿಲ್ಲಲ್ಲೂ ಅವಕಾಶ ಕೊಡುವುದಿಲ್ಲ. ಬ್ಯಾರಿಕೇಡ್ ಹಾಕಿ ಪ್ರತ್ಯೇಕವಾದ ವ್ಯವಸ್ಥೆಯನ್ನು ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೆಲ ಪುಂಡರು ಜನರ ಗುಂಪಿನಲ್ಲಿ ಯುವತಿಯರೊಟ್ಟಿಗೆ ಅಸಭ್ಯವಾಗಿ ವರ್ತಿಸಿದ್ದರು. ಅಲ್ಲಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳಿಗೆ ಕಾರಣವಾಗಿತ್ತು.