ಹೊಸದಿಗಂತ ಡಿಜಿಟಲ್ ಡೆಸ್ಕ್:
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ನಡೆದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದರೆ, ಇತ್ತ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ತೂರಿ ಉದ್ರಿಕ್ತರು ಆಕ್ರೋಶ ಹೊರ ಹಾಕಿದ್ದರು.
ನಾಳೆ ಅಧಿವೇಶನ ಆರಂಭಗೊಳ್ಳಲಿದ್ದು, ಹಾಗಾಗಿ ಎರಡನೇ ಹಂತದ ಹೋರಾಟಕ್ಕೆ ಪಂಚಮಸಾಲಿ ಮುಂದಾಗಿದೆ. ನಾಳೆ ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿ 4ರ ಟೋಲ್ ತಡೆದು ಹೋರಾಟ ಮಾಡಲಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ನಾಳೆ ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರೆ 4ರ ಟೋಲ್ ತಡೆದು ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೆ ಹೋರಾಟ ನಿಲ್ಲಿಸುವುದಿಲ್ಲ. ಸೋಮವಾರದಿಂದ ಅಧಿವೇಶನ ಮುಗಿಯುವವರೆಗೂ ಹೋರಾಟ ಮಾಡುತ್ತೇವೆ. ಸುವರ್ಣಸೌಧದ ಕೊಂಡಸಕೊಪ್ಪ ಬಳಿ ಮತ್ತೆ ಧರಣಿ ಮಾಡುತ್ತೇನೆ ಎಂದಿದ್ದಾರೆ.