Thursday, August 11, 2022

Latest Posts

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಬೆನ್ನಲ್ಲೇ ಇದೀಗ ತಮ್ಮ ಸಹೋದರಿ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನಾನು ಮತ್ತು ನನ್ನ ಅಕ್ಕ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರಲಿದ್ದೇವೆ. ಈಗಾಗಲೇ ಅದರ ಬಗ್ಗೆ ಹಲವು ಸಲ ಮಾತುಕತೆ ನಡೆಸಿದ್ದು, ಅವರು ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಇಚ್ಛಿಸಿದ್ದಾರೆ ಎಂದರು.

ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ತಂದೆ ಬಂಗಾರಪ್ಪ ಅವರ ಮೇಲೆ ಅಪಾರ ಗೌರವವಿದೆ. ಅವರು ನನ್ನನ್ನು ಸೋದರನ ರೀತಿ ಸಹಕಾರ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss