ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಗೀತಾ ಶಿವರಾಜ್‌ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರ ಸಮ್ಮುಖದಲ್ಲಿ ಗೀತಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಬಾವುಟ ನೀಡಿ, ಶಾಲು ಹೊದಿಸಿ ಕಾಂಗ್ರೆಸ್‌ಗೆ ಗೀತಾರನ್ನು ಬರಮಾಡಿಕೊಳ್ಳಲಾಗಿದೆ. ಗೀತಾ ಶಿವರಾಜ್‌ಕುಮಾರ್ ಅವರ ಕಿರಿಯ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ. ಮಧು ಬಂಗಾರಪ್ಪ ಹಾಗೂ ಅವರ ಸಂಬಂಧಿ ಭೀಮಣ್ಣ ನಾಯ್ಕ ಅವರ ಪರ ಗೀತಾ ಪ್ರಚಾರ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!