ಕಾಂಗ್ರೆಸ್ ಗೆ ಮುಖಮಾಡಿದ ಗೀತಾ ಶಿವರಾಜ್ ಕುಮಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್

ರಾಜ್ಯ ಚುನಾವಣಾ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಇತ್ತ ನಾಳೆ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.

ಈ ಕುರಿತಂತೆ ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಾಳೆ ಗೀತಾ ಶಿವರಾಜ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದೆ.

ಗೀತಾ ಶಿವರಾಜ್ ಕುಮಾರ್ ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!