Thursday, March 4, 2021

Latest Posts

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿರುವುದು ಆಘಾತಕಾರಿ ಘಟನೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಿಂದ ಹಾಗೂ ಉನ್ನತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!