August 22, 2026
Saturday, August 22, 2026
spot_img

ಮೋದಿ ತೆರಳುವ ರಸ್ತೆಯಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ ಕೇಸ್‌: ತನಿಖೆಗೆ ನಾಲ್ಕು ತಂಡಗಳ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದು, ಸಂದರ್ಭದಲ್ಲಿ ಭದ್ರತಾ ಲೋಪ ಎದುರಾಗಿದೆ.

ಮೋದಿ ತೆರಳುತ್ತಿದ್ದ ಮಾರ್ಗದ ಮಧ್ಯೆ ಜೆಲಾಟಿನ್‌ ಕಡ್ಡಿಗಳು ಸಿಕ್ಕಿವೆ. ಈ ಬಗ್ಗೆ ತನಿಖೆ ನಡೆಸೋದಕ್ಕೆ ನಾಲ್ಕು ತಂಡಗಳನ್ನು ಮಾಡಲಾಗಿದೆ.

ಜೆಲಿಟಿನ್‌ ಕಡ್ಡಿಗಳನ್ನು ತಂದು ಇಟ್ಟವರ್ಯಾರು? ಇಟ್ಟಿದ್ದು ಯಾಕೆ? ಇವರ ಪ್ಲಾನ್‌ ಏನು ಎನ್ನುವ ಬಗ್ಗೆ ಕಗ್ಗಲೀಪುರ ಪೊಲೀಸರು ತನಿಖೆ ನಡೆಸಿದ್ದಾರೆ. ಆರ್ಟ್‌ ಆಫ್‌ ಲಿವಿಂಗ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ಧ್ಯಾನ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಿದ್ದರು.

ಅವರು ಬಂದು ಕಾರ್ಯಕ್ರಮ ಮುಗಿಸಿ ವಾಪಾಸ್‌ ಹೋಗುವ ವೇಳೆ ಈ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ಪೊಲೀಸರ ಪರಿಶೀಲನೆ ವೇಳೆ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !