September 23, 2026
Wednesday, September 23, 2026
spot_img

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಓರ್ವ ಆರೋಪಿ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಭದ್ರತಾ ಲೋಪ ಉಂಟಾಗಿದ್ದು, ಮಾರ್ಗದ ಸಮೀಪದಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕಗ್ಗಲೀಪುರ ಬಳಿಯ ರವಿಶಂಕರ್ ಗುರೂಜಿ ಆಶ್ರಮದಿಂದ ಸ್ವಲ್ಪ ದೂರದಲ್ಲಿರುವ ತಾತಗುಣಿ ಸಮೀಪ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರಸ್ತೆಯ ಮಾರ್ಗವಾಗಿ ಸಂಚರಿಸಲಿರುವ ಹಿನ್ನೆಲೆ ತಪಾಸಣೆ ನಡೆಸಿದ ಸಂದರ್ಭ ಪೊಲೀಸರಿಗೆ ಸ್ಫೋಟಕಗಳು ಪತ್ತೆಯಾಗಿವೆ.

ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಕೋರಮಂಗಲ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಹೆಚ್ಎಎಲ್ ಹಾಗೂ ಆರ್ಟ್ ಆಫ್ ಲಿವಿಂಗ್ ಬಳಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಕೂಡಲೇ ಆ ವ್ಯಕ್ತಿಯನ್ನು ಪತ್ತೆ ಮಾಡಿದ್ದ ಪೊಲೀಸರು,ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ ತಾತಗುಣಿ ಸಮೀಪದಲ್ಲಿ ರಸ್ತೆಯಿಂದ ಸುಮಾರು 40-50 ಮೀಟರ್ ದೂರದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಆ್ಯಂಟಿ ಸಬೊಟೇಜ್ ಚೆಕ್ ತಂಡದ ಸಿಬ್ಬಂದಿಯು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಜಿಲೆಟಿನ್ ಕಡ್ಡಿಗಳು ಸಕ್ರಿಯಸ್ಥಿತಿಯಲ್ಲಿ ಇರಲಿಲ್ಲ ಎಂಬುದು ತಿಳಿದುಬಂದಿದೆ. ಇದರ ಹಿಂದಿನ ಕೈವಾಡದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !