ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ಜನವರಿ 7ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಾಲ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಚುನಾವಣಾ ದಿನಾಂಕವನ್ನ ಘೋಷಿಸಿದ್ದಾರೆ.
ಪ್ರತಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (BNP) ಮತ್ತು ಬಲಪಂಥೀಯ ಮಿತ್ರ ಪಕ್ಷಗಳಾದ ಜಮಾತ್-ಎ-ಇಸ್ಲಾಮಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರದ ರಾಜೀನಾಮೆಗೆ ಒತ್ತಾಯಿಸಿ ಅಭಿಯಾನವನ್ನು ಪ್ರಾರಂಭಿಸಿದ ಬೆನ್ನಲ್ಲೇ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನ ಘೋಷಿಸಲಾಗಿದೆ.