Monday, October 13, 2025

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ಯುವಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!