July 17, 2026
Friday, July 17, 2026
spot_img

ಸರ್ಕಾರಿ ನೌಕರರಿಗೆ ಜಿಯೋ-ಟ್ಯಾಗ್‌ ಹಾಜರಾತಿ ವ್ಯವಸ್ಥೆ ಜಾರಿ : 10 ಗಂಟೆ ನಂತರ ಬಂದ್ರೆ ಅಟೆಂಡೆನ್ಸ್‌ ತಗೋಳೋದಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಸರ್ಕಾರಿ ನೌಕರರು ಕಚೇರಿಗೆ ಬೆಳಗ್ಗೆ ಹತ್ತು ಗಂಟೆಯೊಳಗೆ ಬರುವುದು ಕಡ್ಡಾಯವಾಗಿದೆ.

ಎಲ್ಲ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ. ನೌಕರರು ಕಚೇರಿಯ ಜಾಗದಲ್ಲಿಯೇ ಇದ್ದು ಹಾಜರಾತಿ ಗುರುತಿಸಬೇಕೆಂಬ ಉದ್ದೇಶದಿಂದ ಸರ್ಕಾರ ಜಿಯೋ-ಟ್ಯಾಗ್ಡ್‌ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ವಿಭಾಗ ಸುತ್ತೋಲೆ ಹೊರಡಿಸಿದೆ.

ಇದರಂತೆ, ಪ್ರತಿಯೊಂದು ಸರ್ಕಾರಿ ಕಚೇರಿಯ ಭೌಗೋಳಿಕ ಸ್ಥಳಾಂಕಗಳ ಪರಿಶೀಲನೆ ಮತ್ತು ದೃಢೀಕರಣ ಮಾಡಬೇಕಾಗಿದೆ. ಹೊಸ ವ್ಯವಸ್ಥೆಯಲ್ಲಿ ನೌಕರರು ಕಚೇರಿಗೆ ಬಂದ ಬಳಿಕವೇ ಹಾಜರಾತಿ ದಾಖಲಿಸಬಹುದಾಗಿದೆ. ಜಿಯೋ-ಕೋಆರ್ಡಿನೇಟ್‌ ತಂತ್ರಜ್ಞಾನದ ಮೂಲಕ ನೌಕರರು ನಿಗದಿತ ಕಚೇರಿ ಸ್ಥಳದಲ್ಲಿದ್ದಾರೆಯೇ ಎಂಬುದನ್ನು ವ್ಯವಸ್ಥೆ ದೃಢಪಡಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !