ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಜರ್ಮನ್ ಯುವತಿ ಮೇಲೆ ಚಾಲನಕೊಬ್ಬ ಅತ್ಯಾಚಾರ ಮಾಡಿರುವ ಘಟನೆಯೊಂದು ಹೈದರಾಬಾದ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಜರ್ಮನಿಯ 25 ವರ್ಷದ ಯುವತಿ ತನ್ನ ಗೆಳೆಯನನ್ನು ಕಾಣಲು ಹೈದರಾಬಾದ್ಗೆ ಬಂದಿದ್ದರು. ಇತರ ಸ್ನೇಹಿತರೊಂದಿಗೆ ಕ್ಯಾಬ್‌ನಲ್ಲಿ ನಗರವನ್ನು ಸುತ್ತಾಡಿದ್ದು, ಸಂಜೆಯ ಬಳಿಕ ಎಲ್ಲರನ್ನೂ ಮನೆಗಳಿಗೆ ಡ್ರಾಪ್ ಮಾಡಿ, ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು.
ಈ ವೇಳೆ ಚಾಲಕ ದಾರಿ ಮಧ್ಯೆ ಕಾರು ನಿಲ್ಲಿಸಿದ್ದು, ಅತ್ಯಾಚಾರ ಮಾಡಿ, ಪರಾರಿಯಾಗಿದ್ದಾನೆಂದು ಯುವತಿ ಆರೋಪಿಸಿದ್ದಾರೆ.
ಸಂತ್ರಸ್ತೆ ಫೋನ್ ಮೂಲಕ ತುರ್ತು ಸಹಾಯವಾಣಿ 100ಕ್ಕೆ ಕರೆ ಮಾಡಿ ದೂರು ನೀಡಿದ್ದು, ಆಕೆಯನ್ನು ಸ್ಥಳದಿಂದ ರಕ್ಷಿಸಲಾಗಿದೆ. ಸದ್ಯ ಆಕೆಯನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.