ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸಂಕಷ್ಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ದೇಶವು ಕೋವಿಡ್ ವಿರುದ್ಧ ಜಯ ಗಳಿಸಿ ಮತ್ತೆ ಮೇಲೆದ್ದು ನಿಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕವು ಶತಮಾನದಲ್ಲಿ ಒಮ್ಮೆ ಬರುವ ಬಿಕ್ಕಟ್ಟಾಗಿದ್ದು, ಪಿಡುಗಿನ ವಿರುದ್ಧದ ಹೋರಾಟದಲ್ಲಿ ಸಮಾಜದ ಪಾಲ್ಗೊಳ್ಳುವಿಕೆಯೂ ಬಹುಮುಖ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೊರೋನಾ ಲಸಿಕೆ, ಔಷಧ ಕೊರತೆಯ ನಿವಾರಣೆಯ ಕುರಿತು ಚರ್ಚಿಸಿ ಅಗತ್ಯಕ್ರಮಕೈಗೊಳ್ಳಲು ತಿಳಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೊರೋನವಿರುದ್ಧ ಹೋರಾಟ ನಡೆಸಬೇಕು. ಶತಮಾನದ ಬಿಕ್ಕಟ್ಟಿನಲ್ಲಿದ್ದೇವೆ. ಸಚಿವರು ತವರು ಕ್ಷೇತ್ರದ ರಾಜ್ಯದ ಜನರ ಜೊತೆ ಸಂಪರ್ಕದಲ್ಲಿ ಇದ್ದು ಸಹಾಯ ಮಾಡಬೇಕು. ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕಳೆದ 14 ತಿಂಗಳ ಕೇಂದ್ರದ ಕಾರ್ಯದ ಬಗ್ಗೆ ಅವಲೋಕನ ನಡೆಸಿ ಮೆಡಿಕಲ್ ಆಕ್ಸಿಜನ್ ಪೂರೈಕೆ, ಉತ್ಪಾದನೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು. ಸೋಂಕು ನಿಯಂತ್ರಣ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ.