ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್. ತಿಂಗಳು ಪೂರ್ತಿ ರೀಲ್ಸ್ಗಳನ್ನು ರಚಿಸುವ ಮೂಲಕ ಆಕರ್ಷಕ ಬಹುಮಾನಗಳನ್ನು ಗೆಲ್ಲಬಹುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಲಕ್ಷಾಂತರ ಗೃಹಿಣಿಯರ ಕುಟುಂಬಗಳಿಗೆ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ‘ಗೃಹಲಕ್ಷ್ಮಿ’ ಯೋಜನೆಯು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ.
ಗೃಹಿಣಿಯರು ಮತ್ತು ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ತಂದಿರುವ ವ್ಯತ್ಯಾಸವನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ಒಂದು ತಿಂಗಳ ಅವಧಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ನಿಮ್ಮ ಜೀವನದಲ್ಲಿನ ಬದಲಾವಣೆಗಳನ್ನು ನಮ್ಮೊಂದಿಗೆ ರೀಲ್ಸ್ ಮೂಲಕ ಹಂಚಿಕೊಳ್ಳಿ ಮತ್ತು ಯಾವ ವೀಡಿಯೊಗಳು ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ ಎಂದು ಹೇಳಿದ್ದಾರೆ.