ಜಮ್ಮುವಿನ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕೆ ಇಳಿದ ಗುಲಾಂ ನಬಿ ಆಜಾದ್!

ಹೊಸದಿಗಂತ ಡಿಜಿಟಲ್ ಡೆಸ್ಕ್‌:

ಲೋಕಸಭೆ ಚುನಾವಣೆಗೆ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ತೊರೆದ ನಂತರ 2022 ರಲ್ಲಿ ಸ್ಥಾಪಿಸಿದ ತಮ್ಮ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಇಂದಿನ ಡಿಪಿಎಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮುಖ್ಯ ವಕ್ತಾರ ಸಲ್ಮಾನ್ ನಿಜಾಮಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಆಜಾದ್ ಅವರು ಉಧಂಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಜಿತೇಂದ್ರ ಸಿಂಗ್ ಎದುರು ಸೋತಿದ್ದರು. ಬಿಜೆಪಿ ಈ ವರ್ಷ ಮಾಜಿ ರಾಜ್ಯ ಸಚಿವ ಜಿಎಂ ಸರೂರಿಯನ್ನು ಉಧಂಪುರದಿಂದ ಕಣಕ್ಕಿಳಿಸಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!