Saturday, October 1, 2022

Latest Posts

ಕಾಂಗ್ರೆಸ್ ಗೆ ರಾಜೀನಾಮೆ ಬೆನ್ನಲ್ಲೇ ಹೊಸ ಪಕ್ಷ ರಚನೆಗೆ ಮುಂದಾದ ಗುಲಾಂ ನಬಿ ಆಜಾದ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಪಕ್ಷ ರಚನೆಗೆ ಸಿದ್ಧತೆ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಸುದೀರ್ಘವಾಗಿ ಆರೋಪ ಮಾಡಿರುವ ಗುಲಾಂ ನಬಿ ಆಜಾದ್, ಹಿರಿಯ ನಾಯಕರ ಅನುಭವ, ಅಭಿಪ್ರಾಯಗಳನ್ನು ರಾಹುಲ್ ಕಡೆ ಗಣಿಸಿದ್ದಾರೆ.ಆದರೆ ಪಕ್ಷದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಅನುಮತಿಗಾಗಿ ಕಾಯುತ್ತಿದ್ದೇನೆ. ನನ್ನದೇ ಹೊಸ ಪಕ್ಷವನ್ನು ಕಟ್ಟುತ್ತೇನೆ. ನನ್ನ ಪಕ್ಷ ಜಮ್ಮು-ಕಾಶ್ಮೀರಕ್ಕೆ ಮಾತ್ರ ಸೀಮಿತವಲ್ಲ. ಜಮ್ಮು-ಕಾಶ್ಮೀರಕ್ಕೆ ಹೋಗಿ ಹೊಸ ಪಕ್ಷ ಆರಂಭಿಸಲಿದ್ದು, ನಂತರ ರಾಷ್ಟ್ರ ರಾಜಕರಣದ ಬಗ್ಗೆ ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಬಿಜೆಪಿ ಅಥವಾ ಇನ್ನಾವುದೇ ಪಕ್ಷ ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿರುವ ಆಜಾದ್, ನಾನು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!