ಕಣಿವೆ ರಾಜ್ಯದಲ್ಲಿ ಇಂದು ಗುಲಾಂ ನಬಿ ಆಜಾದ್ ಹೊಸ ರಾಜಕೀಯ ಪಕ್ಷ ಘೋಷಣೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಮುರಿದು ಒಂದು ತಿಂಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್ ತಮ್ಮ ಹೊಸ ರಾಜಕೀಯ ಪಕ್ಷವನ್ನು ಅನಾವರಣಗೊಳಿಸಲು ಸಿದ್ಧರಾಗಿದ್ದಾರೆ. ಮೂಲಗಳ ಪ್ರಕಾರ ಇಂದು ಸುದ್ದಿಗೋಷ್ಟಿ ನಡೆಸಿ ಪಕ್ಷ, ಚಹ್ನೆ ಹಾಗೂ ಸಿದ್ಧಾಂತಗಳ ಬಗ್ಗೆ ತಿಳಿಸಲಿದ್ದಾರೆ.

ಇದಕ್ಕೂ ಮುನ್ನ ನಿನ್ನೆ (ಭಾನುವಾರ) ತಮ್ಮ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದರು. ಆಜಾದ್ ಅವರು ಕಾಂಗ್ರೆಸ್ ತೊರೆದ ನಂತರ ತನ್ನ ತಾಯ್ನಾಡಿನಲ್ಲಿ ತಮ್ಮದೇ ಆದ ಹೊಸ ಪಕ್ಷವನ್ನು ಸ್ಥಾಪನೆಯತ್ತ ನನ್ನ ಗಮನವಿದೆ ಎಂದಿದ್ದರು. ಜಮ್ಮು ಮತ್ತು ಕಾಶ್ಮೀರದ ಜನರೇ ಪಕ್ಷದ ಹೆಸರು ಮತ್ತು ಧ್ವಜವನ್ನು ನಿರ್ಧರಿಸುತ್ತಾರೆ. ನನ್ನ ಪಕ್ಷವು ರಾಜ್ಯದ ಮರುಸ್ಥಾಪನೆ, ಭೂಮಿಯ ಹಕ್ಕು ಮತ್ತು ಸ್ಥಳೀಯ ನಿವಾಸಿಗಳ ಜೀವನೋದ್ದಾರ ಹಾಗೂ ಉದ್ಯೋಗದ ಮೇಲೆ ಕೇಂದ್ರೀಕರಿಸುತ್ತದೆ

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ರಾಜಕೀಯ ಸಂಘಟನೆಯ ಮೊದಲ ಘಟಕವನ್ನು ರಚಿಸಲಾಗುವುದು ಎಂದು ಆಜಾದ್ ಹೇಳಿದರು. ನಾನು ನನ್ನ ರಾಜ್ಯದಲ್ಲಿ ನನ್ನದೇ ಆದ ಪಕ್ಷವನ್ನು ಸ್ಥಾಪನೆ ಮಾಡಿದ ಬಳಿಕವಷ್ಟೇ ರಾಷ್ಟ್ರ ರಾಜಕಾರಣದ ಬಗ್ಗೆ ಯೋಷಿಸುತ್ತೇನೆ ಎಂದಿದ್ದರು. ಈ ವರ್ಷದ ಕೊನೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!