Friday, September 30, 2022

Latest Posts

ಗುಲಾಂ ನಬಿ ಆಜಾದ್ ದ್ರೋಹಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ನಂತರ ಪಕ್ಷದೊಳಗೆ ಆಘಾತದ ಅಲೆ ಎದ್ದಿದ್ದು, ಈ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ , ಆಜಾದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
40 ವರ್ಷಗಳ ಕಾಲ ಅಧಿಕಾರ ಅನುಭವಿಸಿದ ನಂತರ ತನಗೆ ಎಲ್ಲವನ್ನೂ ನೀಡಿದ ಪಕ್ಷಕ್ಕೆ ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಕ್ಷವು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ(ಬಿಜೆಪಿ) ಸಿದ್ಧಾಂತಗಳ ವಿರುದ್ಧ ಹೋರಾಡುತ್ತಿರುವ ನಿರ್ಣಾಯಕ ಸಮಯದಲ್ಲಿ ಗುಲಾಂ ನಬಿ ಆಜಾದ್ ಅವರು ಓಡಿಹೋಗಿದ್ದಾರೆ. ತನಗೆ ಎಲ್ಲವನ್ನೂ ನೀಡಿದ ಪಕ್ಷಕ್ಕೆ ಮೋಸ ಮಾಡಿದ್ದಾರೆ. ಅವರು ದ್ರೋಹಿ ಎಂದು ಟೀಕಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!