ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರಿಗೆ ಬಸ್‌ನ ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವಿಗೀಡಾದ ಘಟನೆ ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ ವೇಳೆ ತಿತ್ತಕುಡಿ ಸಮೀಪ ಬಸ್‌ನ ಟೈರ್ ಸಿಡಿದು ಚಲಿಸುತ್ತಿದ್ದ ದಿಕ್ಕನ್ನೇ ಬದಲಿಸಿ, ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ.
ಬಸ್ ಟೈರ್ ಸ್ಫೋಟದಿಂದ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೈರ್ ಬ್ಲಾಸ್ಟ್ ಆಗಿ ಎರಡು ಕಾರ್‌ಗೆ ಡಿಕ್ಕಿ ಹೊಡೆದ ದೈತ್ಯ ಬಸ್: ಏಳು ಮಂದಿ ದುರ್ಮರಣ

