ದೀಪಾವಳಿಗೆ ಮೋದಿ ಸರ್ಕಾರದ ಯುವಕರಿಗೆ ಗಿಫ್ಟ್: ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಪ್ರಲ್ಹಾದ್ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್‌

ವರ್ಚುವಲ್ ಮೂಲಕ ಇಂದು 75 ಸಾವಿರ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ಪ್ರಧಾನಿ ಮೋದಿ ವಿತರಿಸಿದ್ದಾರೆ. ಈ ಮೂಲಕ ದೇಶದ ಯುವಕರಿಗೆ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದ್ದಾರೆ.

ಬೆಂಗಳೂರಿನಲ್ಲೂ ಇಂದು ರೋಜ್ ಗಾರ್ ಮೇಳ ನಡೆಯಿತು. ಸರ್ಕಾರದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಯುವಕರಿಗೆ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನೇಮಕಾತಿ ಪತ್ರವನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ನುಡಿದಂತೆ ನಡೆದಿಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. 10 ಲಕ್ಷ ಆಕಾಂಕ್ಷಿಗಳಿಗೆ ಉದ್ಯೋಗದ ಭರವಸೆಯನ್ನು ನೀಡಿರುವ ಪ್ರಧಾನಿ ಮೋದಿಯವರು, ಅದನ್ನು ಶೀಘ್ರದಲ್ಲಿಯೇ ನೆರವೇರಿಸಲಿದ್ದಾರೆ. ಇದರ ಮೊದಲ ಹಂತವಾಗಿ ಇಂದು 75,000 ಯುವಕರಿಗೆ ನೇಮಕಾತಿ ಪತ್ರವನ್ನು ಪ್ರಧಾನಿ ಮೋದಿ ಅವರು ಖುದ್ದಾಗಿ ವರ್ಚುವಲ್ ವೇದಿಕೆಯ ಮೂಲಕ ಹಸ್ತಾಂತರಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ್, ಸಂಸದ ಪಿ.ಸಿ ಮೋಹನ್, ಹಾಗೂ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here