ನ್ಯೂಜಿಲೆಂಡ್ ವಿರುದ್ದದ ಅಮೋಘ ದ್ವಿಶತಕ ಸಿಡಿಸಿ ಹೊಸ ದಾಖಲೆ ಬರೆದ ಗಿಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನ್ಯೂಜಿಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಶುಭಮನ್ ಗಿಲ್ ಹೊಸ ದಾಖಲೆ ಬರೆದಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಶುಭಮನ್ ಗಿಲ್ ಏಕಾಂಗಿ ಹೋರಾಟ ನಡೆಸಿ ಶತಕ ಸಿಡಿಸಿದ್ದಾರೆ. ಶುಭಮನ್ ಗಿಲ್ 149 ಎಸೆತದಲ್ಲಿ 208 ರನ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಅತೀ ಕಿರಿಯ ಆಟಾಗಾರ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಅತೀ ಕಿರಿಯ ಬ್ಯಾಟ್ಸ್‌ಮನ್
ಶುಭಮನ್ ಗಿಲ್, ದ್ವಿಶತಕ vs ನ್ಯೂಜಿಲೆಂಡ್( 23 ವರ್ಷ, 132 ದಿನ), ಇಶಾನ್ ಕಿಶನ್ vs ಬಾಂಗ್ಲಾದೇಶ(24 ವರ್ಷ, 145 ದಿನ) , ರೋಹಿತ್ ಶರ್ಮಾ vs ಆಸ್ಟ್ರೇಲಿಯಾ( 26 ವರ್ಷ, 186 ದಿನ). ಇದಕ್ಕೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತು. 1999ರಲ್ಲಿ ಸಚಿನ್ ತೆಂಡೂಲ್ಕರ್ ನ್ಯೂಜಿಲೆಂಡ್ ವಿರುದ್ಧ ಅಜೇಯ 186 ರನ್ ಸಿಡಿಸಿದ್ದರು. ಇದೀಗ ಗಿಲ್ 208 ರನ್ ಸಿಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!