ಗಿಲ್ ಕ್ಲೀನ್ ಬೌಲ್ಡ್…ಸಾರಾ ಹಾರ್ಟ್‌ ಬ್ರೋಕನ್: ಮತ್ತೆ ವೈರಲ್ ಆಯಿತು ತೆಂಡುಲ್ಕರ್ ಮಗಳ ಹೊಸ ಪೋಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌‌

ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಟೀಂ ಇಂಡಿಯಾ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಕಣಕ್ಕಿಳಿದಿದ್ದು, ಆರಂಭಿಕ ಆಘಾತ ಅನುಭವಿಸಿದೆ.

ಆರಂಭದಲ್ಲೇ 40 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡು ಕಂಗಾಲಾಗಿ ಹೋಗಿದೆ.ನಾಯಕ ರೋಹಿತ್ ತಂಡಕ್ಕೆ ಆಸರೆಯಾಗಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ಉತ್ತಮ ಆರಂಭ ಪಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಗಿಲ್ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ವಿರಾಟ್ ಕೊಹ್ಲಿ ಶೂನ್ಯ ಸಂಪಾದನೆ ಮಾಡಿದರು. ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಕೇವಲ 4 ರನ್‌ಗಳಿಗೆ ಸೀಮಿತವಾಯಿತು.

ಇತ್ತ ಆತ್ಮೀಯ ಗೆಳೆಯ ಶುಭ್‌ಮನ್ ಗಿಲ್ ದೊಡ್ಡ ಇನಿಂಗ್ಸ್ ಆಡಬಹುದು ಎಂದು ಕಾತರದಿಂದ ಕಾಯುತ್ತಿದ್ದ ಸಾರಾ ತೆಂಡುಲ್ಕರ್‌ಗೆ ಭಾರೀ ನಿರಾಸೆ ಎದುರಾಗಿದೆ. ತಮ್ಮ ನಿರಾಸೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ.

ಶುಭ್‌ಮನ್ ಗಿಲ್ ಕ್ಲೀನ್ ಬೌಲ್ಡ್ ಆಗಿರುವ ಫೋಟೋ ಜತೆಗೆ ಹಾರ್ಟ್‌ ಬ್ರೋಕನ್ ಎಮೋಜಿಯನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಗಿಲ್ ಮೇಲಿನ ನೋವು ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್‌ ಈಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here