ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಐಪಿಎಲ್ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಸಾಂಪ್ರದಾಯಿಕ ಡಾರ್ಕ್ ಬ್ಲೂ ಜೆರ್ಸಿ ಬದಲು ಲ್ಯಾವೆಂಡರ್ ಜೆರ್ಸಿ ಧರಿಸಿ ಫೀಲ್ಡಿಗೆ ಇಳಿಯಲಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 13ರಂದು ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ವಿಶೇಷ ಲ್ಯಾವೆಂಡರ್ ಬಣ್ಣದ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ.
ಲ್ಯಾವೆಂಡರ್ ಸಾಮಾನ್ಯವಾಗಿ ಅನ್ನನಾಳದ ಕ್ಯಾನ್ಸರ್‌ಗೆ ಸಂಬಂಧಿಸಿದ್ದಾಗಿದೆ. ಇದು ಎಲ್ಲಾ ರೀತಿಯ ಕ್ಯಾನ್ಸರ್ ಅನ್ನು ಪ್ರತಿನಿಧಿಸುತ್ತದೆ. ಈ ವಿನಾಶಕಾರಿ ರೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಂಡದ ಜವಾಬ್ದಾರಿಯುತ ಪ್ರಜ್ಞೆ ಎಂದು ಗುಜರಾತ್ ಟೈಟಾನ್ಸ್ ತಂಡ ಹೇಳಿಕೊಂಡಿದೆ.