ಗಿಲ್- ರೋಹಿತ್ ಬೊಂಬಾಟ್ ಆಟ: ಭಾರತಕ್ಕೆ ಗೆಲುವಿನ ಖುಷಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿದೆ.

ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ , 109 ಟಾರ್ಗೆಟ್ ಅನ್ನು ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ದಿಟ್ಟ ಹೋರಾಟ ಮೂಲಕ ಚೇಸ್ ಮಾಡಿದರು. ಈ ಮೂಲಕ ೨ ವಿಕೆಟ್ ನಷ್ಟಕ್ಕೆ ಭಾರತ 20.1 ಓವರ್‌ಗಳಲ್ಲಿ ಗುರಿ ತಲುಪಿತು. ಇದರೊಂದಿಗೆ 2 ಪಂದ್ಯ ಗೆದ್ದೂ ಏಕದಿನ ಸರಣಿ ಗೆದ್ದುಕೊಂಡಿದೆ.

ರೋಹಿತ್ ಶರ್ಮಾ 47 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿದರು. 51 ರನ್ ಸಿಡಿಸಿ ನಿರ್ಗಮಿಸಿದರು.

ರೋಹಿತ್ ಬಳಿಕ ವಿರಾಟ್ ಕೊಹ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. 11 ರನ್ ಸಿಡಿಸಿ ಔಟಾದರು. ಗಿಲ್ ಹಾಗೂ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ಭಾರತ 20.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು.
ಶುಭಮನ್ ಗಿಲ್ ಅಜೇಯ 40 ರನ್ ಸಿಡಿಸಿದರೆ, ಇಶಾನ್ ಕಿಶನ್ ಅಜೇಯ 8 ರನ್ ಸಿಡಿಸಿದರು. ಭಾರತ 8 ವಿಕೆಟ್ ಭರ್ಜರಿ ಗೆಲುವು ದಾಖಲಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!