ಗಿಲ್- ಸಾಹ ಬೊಂಬಾಟ್ ಆಟ: ಲಖನೌ ಗೆಲುವಿಗೆ ಕಠಿಣ ಗುರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶುಭ್‌ಮನ್‌ ಗಿಲ್(96*) ಹಾಗೂ ವೃದ್ದಿಮಾನ್ ಸಾಹ(81) ಸ್ಪೋಟಕ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಕೇವಲ 2 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿದ್ದು, ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಗುಜರಾತ್ ತಂಡಕ್ಕೆ ವಿಕೆಟ್‌ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಹಾಗೂ ಶುಭ್‌ಮನ್‌ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಶತಕದ ಜತೆಯಾಟವಾಡಿ ಭದ್ರಬುನಾದಿ ಹಾಕಿಕೊಟ್ಟರು.

ಈ ಜೋಡಿ ಮೊದಲ 10 ಓವರ್‌ಗಳಲ್ಲಿವಿಕೆಟ್ ನಷ್ಟವಿಲ್ಲದೇ 121 ರನ್ ಕಲೆಹಾಕಿತು. ಮೊದಲ ವಿಕೆಟ್‌ಗೆ ಗುಜರಾತ್ ಟೈಟಾನ್ಸ್ ತಂಡವು 12.1 ಓವರ್‌ಗಳಲ್ಲಿ 142 ರನ್‌ಗಳ ಜತೆಯಾಟವಾಡಿತು. ಕೊನೆಗೂ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಆವೇಶ್ ಖಾನ್ ಯಶಸ್ವಿಯಾದರು. ವೃದ್ದಿಮಾನ್ ಸಾಹ 43 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 81 ರನ್ ಬಾರಿಸಿ ಪ್ರೇರಕ್‌ ಮಂಕಡ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಇನ್ನು ಕ್ರೀಸ್‌ಗಿಳಿದ ನಾಯಕ ಹಾರ್ದಿಕ್ ಪಾಂಡ್ಯ ಕೂಡಾ ಸ್ಪೋಟಕ ಬ್ಯಾಟಿಂಗ್ ನಡೆಸಿದರು. ಶುಭ್‌ಮನ್‌ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ ಜೋಡಿ ಎರಡನೇ ವಿಕೆಟ್‌ಗೆ ಕೇವಲ 23 ಎಸೆತಗಳಲ್ಲಿ 42 ರನ್‌ಗಳ ಜತೆಯಾಟ ನಿಭಾಯಿಸಿತು. ಹಾರ್ದಿಕ್ ಪಾಂಡ್ಯ 15 ಎಸೆತಗಳಲ್ಲಿ ಒಂದು ಬೌಂಡರಿ ಸಹಿತ ಎರಡು ಸಿಕ್ಸರ್ ಸಹಿತ 25 ರನ್ ಬಾರಿಸಿ ಮೊಯ್ಸಿನ್‌ ಖಾನ್‌ಗೆ ವಿಕೆಟ್ ಒಪ್ಪಿಸಿದರು.

ಆರಂಭದಿಂದಲೂ ಮಿಂಚಿನ ಆಟವಾಡಿದ ಶುಭ್‌ಮನ್‌ ಗಿಲ್‌ ಕೊನೆಯ ತನಕ ಬ್ಯಾಟಿಂಗ್ ಮಾಡುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಶುಭ್‌ಮನ್ ಗಿಲ್ 51 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 7 ಮುಗಿಲೆತ್ತರದ ಶತಕದ ಸಹಿತ 94 ರನ್ ಬಾರಿಸಿ ಅಜೇಯ ರಾಗುಳಿದರು. ಇನ್ನು ಕೇವಲ 6 ರನ್ ಅಂತರದಲ್ಲಿ ಶತಕ ಸಿಡಿಸುವ ಅವಕಾಶದಿಂದ ವಂಚಿತರಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!