ಹೊಸದಿಗಂತ ಡಿಜಿಟಲ್ ಡೆಸ್ಕ್:
ಶುಭ್ಮನ್ ಗಿಲ್ (84) ಹಾಗೂ ಅನುಭವಿ ಜೋಸ್ ಬಟ್ಲರ್ (50) ಸಿಡಿಸಿದ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟನ್ಸ್ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 209 ರನ್ಗಳಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಗುಜರಾತ್ ಪರ ಸಾಯಿ ಸುದರ್ಶನ್ ಹಾಗೂ ನಾಯಕ ಗಿಲ್ ಮೊದಲ ವಿಕೆಟ್ ಜೊತೆಯಾಟದಲ್ಲಿ 93 ರನ್ ಸೇರಿಸಿದರು. ಸುದರ್ಶನ್ 30 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 39 ರನ್ಗಳಿಸಿ ಕ್ಯಾಚ್ ನೀಡಿ ಔಟ್ ಆದರು.
3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಆಗಮಿಸಿದ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ 2ನೇ ವಿಕೆಟ್ ಜೊತೆಯಾಟದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಸನ ನೀಡಿದರು. ಇಬ್ಬರು ಕೇವಲ 38 ಎಸೆತಗಳಲ್ಲಿ 74 ರನ್ ಸೇರಿಸಿದರು. ಗಿಲ್ 50 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ಗಳ ಸಹಿತ 84 ರನ್ಗಳಿಸಿ ತೀಕ್ಷಣಗೆ 2ನೇ ಬಲಿಯಾದರು.
ಜೋಸ್ ಬಟ್ಲರ್ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದರು. ಕೇವಲ 26 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ಗಳ ಸಹಿತ 50 ರನ್ಗಳಿಸಿದರು. ವಾಷಿಂಗ್ಟನ್ ಸುಂದರ್ 8 ಎಸೆತಗಳಲ್ಲಿ 13ರನ್ಗಳಿಸಿದರು. ರಾಹುಕ್ ತೆವಾಟಿಯಾ 9, ಶಾರುಖ್ ಖಾನ್ 5 ರನ್ಗಳಿಸಿದರು.