Friday, July 1, 2022

Latest Posts

ಮೇಕೆದಾಟು ಯೋಜನೆಗೆ ಕಾಂಗ್ರೆಸ್ ನಾಯಕರು ನಡೆಸುವ ಪಾದಯಾತ್ರೆ ಗಿಮಿಕ್: ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ,ಮೈಸೂರು:

ಶೀಘ್ರದಲ್ಲೇ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಲಿದೆ. ಇದನ್ನ ಅರಿತ ಕಾಂಗ್ರೆಸ್ ನಾಯಕರು ಪಾದಯಾತ್ರೆಯ ದೊಡ್ಡ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಹಕಾರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಿಡಿಕಾರಿದರು.
ಶನಿವಾರ ನಗರದ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಮುಂಭಾಗ ಅರಮನೆ ಮಂಡಳಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಅವರು ಕೇಂದ್ರದ ನಾಯಕರನ್ನ ಭೇಟಿ ಮಾಡಿ, ಒತ್ತಡ ಹೇರಿದ್ದಾರೆ. ಕೇಂದ್ರ ಸರ್ಕಾರದಿಂದಲೂ ಸಕರಾತ್ಮಕ ಸ್ಪಂದನೆ ಸಿಕ್ಕಿದೆ. ಹಾಗಾಗಿ ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಅನುಮತಿ ಸಿಗಲಿದೆ. ಇದು ಗೊತ್ತಾಗಿಯೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯ ಗಿಮಿಕ್ ಮಾಡುತ್ತಿದ್ದಾರೆ.
ಪಾದಯಾತ್ರೆ ಮಾಡಿದರೆ ಮುಂದೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅಂದುಕೊAಡಿದ್ದರೆ ಅದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಕನಸು. ಚಿತ್ರ ನಟರಾದ ನಮ್ಮ ಮುಖ್ಯಮಂತ್ರಿ ಚಂದ್ರು ತರ ಡಿ.ಕೆ.ಶಿವಕುಮಾರ್ ಅವರು ಪರ್ಮನೆಂಟ್ ಸಿಎಂ ಆಗಬೇಕು ಅಷ್ಟೇ ಎಂದು ಲೇವಡಿ ಮಾಡಿದರು.
ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿಚಾರ ಅಧಿವೇಶನದಲ್ಲೂ ಚರ್ಚೆಯಾಗಿದೆ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ವತಃ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ. ಹಾಗಾಗಿ ಡಿ.31ಕ್ಕೆ ಕರ್ನಾಟಕ ಬಂದ್ ಮಾಡುವುದು ಬೇಡ ಎಂದು ಬಂದ್ ಕರೆ ನೀಡಿರುವ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದು ಕೇವಲ ಮಾಧ್ಯಮ ಸೃಷ್ಠಿ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ ರಾಷ್ಟç ನಾಯಕರೆಲ್ಲಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೇ ಪೂರ್ಣ ಅವಧಿ ಪೂರೈಸುತ್ತಾರೆ ಅಂತ ಹೇಳಿದ್ದಾರೆ. ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವರೇ ಬಹಿರಂಗ ವೇದಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಹೀಗಿದ್ದರೂ ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದರು.
ಸAಪುಟ ಪುನರ್ ರಚನೆ ಸಿಎಂ ಪರಮಾಧಿಕಾರ. ಒಂದು ವೇಳೆ ಪುನರ್ ರಚನೆ ಮಾಡಿದ್ರೂ ನನ್ನ ಖಾತೆ ಮೇಲೆ ನಿಮಗ್ಯಾಕೆ ಕಣ್ಣು ಎಂದು ಪ್ರಶ್ನಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss