ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರಗಿಯಲ್ಲಿ 46 ಸಹಾಯಕ ಪ್ರಾಧ್ಯಾಪಕ, ಸೀನಿಯರ್ ರೆಸಿಡೆಂಟ್ ಮತ್ತು ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಎಂಬಿಬಿಎಸ್, ಎಂ.ಡಿ, ಎಂ.ಎಸ್, ಡಿಎನ್‌ಬಿ, ಸ್ನಾತಕೋತ್ತರ ಪದವಿ, ಡಿ.ಎಂ ವಿದ್ಯಾರ್ಹತೆ ಜೊತೆಗೆ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 27,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.