ಬಾಲಕಿ ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸಗೌಡ ಜೈಲಿನಿಂದ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ಸೋನು ಶ್ರೀನಿವಾಸಗೌಡ (Sonu Srinivas Gowda) 11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್​ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತನ್ನು ನ್ಯಾಯಾಧೀಶರು ವಿಧಿಸಿದ್ದರು.ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸೋನು ಶ್ರೀನಿವಾಸಗೌಡ ತೆರಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!