Monday, September 26, 2022

Latest Posts

ಮಣಿಪಾಲದಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ: ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉಡುಪಿ ಜಿಲ್ಲೆಯ ಮಣಿಪಾಲ ಅಕಾಡೆಮಿ ಸ್ಕೂಲಿನ ಒಂದನೇ ತರಗತಿ ವಿದ್ಯಾರ್ಥಿನಿ ಮೈಮೇಲೆ ಬುಧವಾರ ಬೀದಿ ನಾಯಿಗಳ ಗುಂಪೊಂದು ಎರಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಬಹಳವಾಗಿ ಹೆಚ್ಚಳ ಕಂಡಿದೆ. ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳ ತಿರುಗಾಟಕ್ಕೂ ಭೀತಿ ಎದುರಾಗಿದೆ.

ನಗರಸಭೆ ತಕ್ಷಣವಾಗಿ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗು ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!