ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಲೋವೆರಾ ಜ್ಯೂಸ್ ಎಂದು ಬಾಲಕಿಯೊಬ್ಬಳು ಕ್ರಿಮಿನಾಶಕ ಸೇವಿಸಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿ ನಿಧಿ ಕೃಷ್ಣ(14) ಮೃತ ಬಾಲಕಿ.
ಬಾಲಕಿಯು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ ಆಲೋವೆರಾ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಔಷಧವನ್ನು ಮನೆಯವರು ತುಂಬಿಟ್ಟಿದ್ದರು.ಮಾ. 18ರಂದು ಬಾಲಕಿ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ್ದಳು. ಬಳಿಕ ಅನಾರೋಗ್ಯದ ಹಿನ್ನಲೆ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಾ. 31ರಂದು ಬಾಲಕ ಸಾವನ್ನಪ್ಪಿದ್ದಾಳೆ.