ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ.
ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



