ತಿರುಪತಿಯಲ್ಲಿ ಚಿರತೆ ದಾಳಿಗೆ ಬಾಲಕಿ ಸಾವು: ಮಕ್ಕಳನ್ನು ಕರೆದುಕೊಂಡು ಹೋಗಲು ಹೊಸ ರೂಲ್ಸ್ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ತಿರುಮಲದ ಅಲಿಪಿರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಟಿಟಿಡಿ ಅಲರ್ಟ್ ಆಗಿದ್ದು,ವೆಂಕಟೇಶ್ವರ ಸ್ವಾಮಿ ದರುಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹೊಸ ನಿಯಮವನ್ನು ಪ್ರಕಟಿಸಿದೆ.

ಬೆಟ್ಟ ಹತ್ತಲು ಮಕ್ಕಳನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಬದಲಾವಣೆ ಮಾಡಿದ್ದು, ಇದಕ್ಕಾಗಿ ಅಲಿಪಿರಿ ಹಾಗೂ ತಿರುಮಲ ನಡುವಿನ 7ನೇ ಮೈಲಿಯಲ್ಲಿ ಪೊಲೀಸ್ ಚೌಕಿಗಳನ್ನು ತೆರೆಯಲಾಗಿದೆ. ಇಲ್ಲಿ ಮಕ್ಕಳು ಹಾಗೂ ಶಿಶುಗಳ ಕೈಗೆ ಭದ್ರತಾ ಟ್ಯಾಗ್ ಅನ್ನು ಕಟ್ಟಿ ಕಳುಹಿಸಲಾಗುತ್ತಿದೆ. ಜತೆಗೆ 15 ವರ್ಷದೊಳಗಿನ ಮಕ್ಕಳನ್ನು ಬೆಟ್ಟ ಹತ್ತಲು ಕರೆದುಕೊಂಡು ಹೋಗುವವರಿಗೆ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಮಾತ್ರ ಸಮಯ ನಿಗದಿ ಮಾಡಿದೆ. ಜತೆಗೆ ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ದ್ವಿಚಕ್ರ ವಾಹನಗಳಿಗೆ ಘಾಟಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ತಿರುಮಲ ಬೆಟ್ಟದ ಐದು ಕಡೆ ಚಿರತೆಗಳ ಚಲನವಲನ ಕಂಡುಬಂದಿದೆ. ಇವುಗಳಲ್ಲಿ ಮೂರು ಚಿರತೆಗಳು ಅಲಿಪಿರಿ ಹಾಗೂ ಘಾಟಿಯ 38ನೇ ತಿರುವಿನಲ್ಲಿರುವ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನ ಇರುವ ಗಾಳಿಗೋಪುರಂ ಬಳಿ ಕಾಣಿಸಿಕೊಂಡಿವೆ. ಘಾಟಿಯ ಕೆಳ ಭಾಗದಲ್ಲೂ ಭಾನುವಾರ ಬೆಳಿಗ್ಗೆ 6.30ರ ಸುಮಾರಿಗೆ ಚಿರತೆ ಕಂಡುಬಂದಿತ್ತು. ಚಿರತೆಯ ಚಲನವಲನ ಬೆಳಿಗ್ಗೆ 5ರಿಂದ 8 ಗಂಟೆಯವರೆಗೆ ಹೆಚ್ಚಾಗಿದೆ.ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಲಾಗಿದೆ.

ಬೆಟ್ಟ ಹತ್ತುವ ಮಾರ್ಗದ ಮೆಟ್ಟಿಲುಗಳ ಮೇಲೂ ಚಿರತೆ ಓಡಾಡಿದ್ದನ್ನು ಅರಣ್ಯ ಇಲಾಖೆ ಸಿಬ್ಬಂದಿ ಗುರುತಿಸಿದ್ದಾರೆ. ಇವುಗಳನ್ನು ಓಡಿಸಲು ಪಟಾಕಿಗಳನ್ನು ಸಿಡಿಸಲಾಗಿದೆ’ ಎಂದು ಟಿಟಿಡಿ ವಿಚಕ್ಷಣದಳ ಸಿಬ್ಬಂದಿ ತಿಳಿಸಿದ್ದಾರೆ.

ಟಿಟಿಡಿ EO ಧರ್ಮಾರೆಡ್ಡಿ ಹೇಳಿಕೆ ‘ಘಾಟಿಯಲ್ಲಿ ಪ್ರಾರಂಭಿಸಲಾಗಿರುವ ಪೊಲೀಸ್ ಚೌಕಿಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವ ಪಾಲಕರ ವಿವರಗಳನ್ನು ದಾಖಲಿಸಲಾಗುತ್ತಿದೆ.ಮಕ್ಕಳ ಕೈಗೆ ಟ್ಯಾಗ್ ಕಟ್ಟಲಾಗುತ್ತಿದೆ. ಪಾಲಕರು ಮಕ್ಕಳನ್ನು ಕೈಬಿಡದಂತೆ ಹಾಗೂ ಮಕ್ಕಳು ಪಾಲಕರನ್ನು ಬಿಟ್ಟಿರದಂತೆ ಸೂಚನೆ ನೀಡಲಾಗುತ್ತಿದೆ. ಒಂದೊಮ್ಮೆ ಪಾಲಕರಿಂದ ಮಕ್ಕಳು ಪ್ರತ್ಯೇಕಗೊಂಡರೆ ಕೈಗೆ ಕಟ್ಟಿರುವ ಟ್ಯಾಗ್ ಮೂಲಕ ಪಾಲಕರ ಪತ್ತೆ ಕಾರ್ಯ ನಡೆಸಲಾಗುವುದು. ಈ ಪದ್ಧತಿಯನ್ನು ಬ್ರಹ್ಮೋತ್ಸವ ಸಂದರ್ಭದಲ್ಲಿ ಪಾಲಿಸಲಾಗುತ್ತಿತ್ತು.ಆದರೆ ಇವು ಡಿಜಿಟಲ್ ಅಥವಾ ಆರ್ಎಫ್ಐಡಿ ಟ್ಯಾಗ್ ಅಲ್ಲ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!