ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯ ಜನತೆ ಬೆಚ್ಚಿಬೀಳಿಸುವಂತಹ ಘಟನೆಯೊಂದು ಇಂದು ನಡೆದಿದ್ದು,
ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಗೆ ರಾಡ್ ನಿಂದ ಥಳಿಸಿ ಹತ್ಯೆ ಮಾಡಲಾಗಿದೆ.
ಮಾಳವೀಯ ನಗರದ ಅರಬಿಂದೋ ಕಾಲೇಜು ಸಮೀದಲ್ಲಿರುವ ಪಾರ್ಕ್‌ಗೆ ಯುವತಿ ಜೊತೆ ಒಬ್ಬ ಹುಡುಗ ಓಡಿ ಬಂದಿದ್ದು, ರಾಡ್ ನಿಂದ ಮನಬಂದಂತೆ ಹಲ್ಲೆ ಮಾಡಿ ಓಡಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.
ಪಾರ್ಕ್‌ನಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ವಿದ್ಯಾರ್ಥಿನಿಯ ಶವದ ಪಕ್ಕದಲ್ಲಿ ರಕ್ತ ಸಿಕ್ತ ಕಬ್ಬಿಣ ರಾಡ್ ಕೂಡ ಪತ್ತೆಯಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಘಟನೆಯ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.