ಮೀರ್‌ಪೇಟ್‌ನಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಮೀರ್‌ಪೇಟ್‌ನಲ್ಲಿ ಬಾಲಕಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಒಂಭತ್ತನೇ ತರಗತಿಯ ಬಾಲಕಿ ಮೇಲೆ ಮೂವರು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇರೆಗೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.  ತಲೆಮರೆಸಿಕೊಂಡಿರುವ ಇನ್ನಿಬ್ಬರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೀರ್‌ಪೇಟ್‌ನ ಪಿಎಸ್‌ ವ್ಯಾಪ್ತಿಯ ಲೆನಿನ್‌ ನಗರದಲ್ಲಿ ವಾಸವಿರುವ ಕುಟುಂಬದಲ್ಲಿ ಒಂಭತ್ತನೇ ತರಗತಿ ಓದುತ್ತಿರುವ ಬಾಲಕಿ ಮೇಲೆ ಈ ದುಷ್ಕೃತ್ಯ ನಡೆದಿದೆ. ಬಾಲಕಿ ನಿನ್ನೆ ರಾತ್ರಿ ತನ್ನ ಸ್ನೇಹಿತೆಯ ಮನೆಗೆ ತೆರಳುವಾಗ ಕೆಲ ದಿನಗಳಿಂದ ಆಕೆಯ ಮೇಲೆ ಕಣ್ಣಿಟ್ಟಿದ್ದ ಕಿಡಿಗೇಡಿಗಳು ಇದೇ ಸಮಯ ಎಂದು ಭಾವಿಸಿ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದಾರೆ. ಬಾಲಕಿಯನ್ನು ಮೂರು ಗಂಟೆಗಳ ಕಾಲ ಬೈಕ್‌ನಲ್ಲಿ ಸುತ್ತಾಡಿಸಿ ರಾತ್ರಿ 11 ಗಂಟೆ ಸುಮಾರಿಗೆ ಖಾಲಿ ಪ್ರದೇಶದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಈ ವೇಳೆ ಬಾಲಕಿ ಕೂಗಾಡುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿಯೊಬ್ಬರು ಸ್ಥಳಕ್ಕೆ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ದುಷ್ಕರ್ಮಿಗಳ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!