ಉತ್ತರ ಪ್ರದೇಶದಲ್ಲಿ ಬಾಲಕಿ ಅಪಹರಿಸಿ ಅತ್ಯಾಚಾರ, ತಿಂಗಳ ನಂತರ ಬಾಲಕಿ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಬಲಿಯಾದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಸತತವಾಗಿ ಒಂದೂವರೆ ತಿಂಗಳು ಅತ್ಯಾಚಾರ ಎಸಗಲಾಗಿದೆ.

ಕೊತ್ವಾಲಿ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮವೊಂದರ ಬಾಲಕಿಯನ್ನು ಒಂದೂವರೆ ತಿಂಗಳ ಹಿಂದೆ ಅಪಹರಿಸಲಾಗಿದೆ. ಬಾಲಕಿಯ ಪೋಷಕರು ಮರುದಿನವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಇದಾದ ಒಂದೂವರೆ ತಿಂಗಳ ನಂತರ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. 19 ವರ್ಷದ ರಾಹುಲ್ ಕುಮಾರ್ ಸಿಂಗ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ. ಆರೋಪಿಗೆ ಕಠಿಣ ಶಿಕ್ಷೆ ನೀಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!