ರಸ್ತೆಯಲ್ಲಿ ತೆರಳುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದ ಕ್ರೇನ್‌: ಘಟನೆ ವಿಡಿಯೋದಲ್ಲಿ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಸ್ತೆಯಲ್ಲಿ ಯುವತಿಗೆ ಕ್ರೇನ್ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಂಗಳೂರಿನ ವೈಟ್‌ಫೀಲ್ಡ್ ನಲ್ಲಿ ನಡೆದಿದೆ. ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ನೂರ್ ಫಿಜಾ ಎಂಬ ಯುವತಿ ಶುಕ್ರವಾರ ಕಾಲೇಜಿನಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ವೇಗವಾಗಿ ಬಂದ ಕ್ರೇನ್ ಯುವತಿಗೆ ಡಿಕ್ಕಿ ಹೊಡೆದಿದೆ. ಕ್ರೇನ್ ಟೈರ್ ಅವಳ ಮೇಲೆ ಹರಿದು ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ತೀವ್ರ ಗಾಯಗಳಿಂದಾಗಿ ಶುಕ್ರವಾರ ಸಂಜೆ ಆಕೆ ಮೃತಪಟ್ಟಿದ್ದಾಳೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕ್ರೇನ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ವೀಡಿಯೋದಿಂದ ಸ್ಪಷ್ಟವಾಗಿದೆ. ಈ ಘಟನೆಯಿಂದ ಆಕ್ರೋಶಗೊಂಡ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸಂಬಂಧಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು. ಈ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ಈ ಭಾಗದಲ್ಲಿ ಅಕ್ರಮ ಕಟ್ಟಡಗಳು ನಡೆಯುತ್ತಿವೆ. ಈ ಪ್ರದೇಶದಲ್ಲಿ ಕಾಲೇಜುಗಳಿದ್ದರೂ ಕನಿಷ್ಠ ಸ್ಪೀಡ್ ಬ್ರೇಕರ್‌ಗಳಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!