ಹೊಸದಿಗಂತ ವರದಿ ಹುಬ್ಬಳ್ಳಿ:
ಐದು ವರ್ಷದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಭೇಟಿ ನೀಡಿ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ಸಂತೋಷ ಲಾಡ್, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಸಾರ್ವಜನಿಕರು ಆರೋಪಿ ಹಿಡಿಯುವಲ್ಲಿ ಸಹಕಾರಿ ಮಾಡಿದ್ದಾರೆ. ಪೊಲೀಸ್ ಇಲಾಖೆ ಉತ್ತಮ ಕಾರ್ಯ ಮಾಡಿದೆ ಎಂದರು.
ಪೋಷಕರು ಚಿಕ್ಕ ಮಕ್ಕಳನ್ನು ರಸ್ತೆಯಲ್ಲಿ ಬಿಡುವಾಗ ಎಚ್ಚರಿಕೆ ವಹಿಸಬೇಕು. ನಮ್ಮ ಎಲ್ಲಾ ಇಲಾಖೆಯಿಂದಲೂ ಈ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನಿಡುತ್ತೇನೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹತ್ತು ಲಕ್ಷ ಘೋಷಣೆ ಮಾಡಿದ್ದಾರೆ. ಹೆಚ್ಚಿನ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿಗಳ ಆರೋಗ್ಯ ವಿಚಾರಿಸಿದ ಸಂತೋಷ ಲಾಡ್ ಹಾಗೂ ಅಧಿಕಾರಿಗಳು.