ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಮುಂಬೈನ ಶಾಲೆ ಆವರಣದಲ್ಲಿ 15 ವರ್ಷದ ಬಾಲಕನಿಂದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ನಡೆದಿದೆ.
ಬಾಲಕಿಯನ್ನು ಶಾಲೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಆದರೆ ಬಾಲಕಿ ತನ್ನ ಮನೆಗೆ ಕಷ್ಟಪಟ್ಟು ತಲುಪಿದ್ದು, ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ.
ಘಟನೆಗೆ ಸಂಬಂಧಿಸಿ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಾಲಕನಿಗಾಗಿ ಶೋಧ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.