ವಿದ್ಯಾರ್ಥಿನಿಯರ ವಿಡಿಯೋ ಲೀಕ್: ಉನ್ನತ ಮಟ್ಟದ ತನಿಖೆಗೆ ಪಂಜಾಬ್ ಸಿಎಂ ಮಾನ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಹಲವು ವಿದ್ಯಾರ್ಥಿನಿಯರ ಕೆಲವು ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಆನ್‍ಲೈನ್‍ನಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ಭುಗಿಲೆದ್ದಿವೆ.ಇತ್ತ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇದೀಗ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ ಸಿಎಂ ಭಗವಂತ್ ಮಾನ್, ಹೆಣ್ಣುಮಕ್ಕಳು ನಮ್ಮ ಗೌರವ ಮತ್ತು ಹೆಮ್ಮೆ. ಅಂತಹ ಯಾವುದೇ ಘಟನೆಯು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಘಟನೆಯ ಬಗ್ಗೆ ಆಳವಾದ ತನಿಖೆಯನ್ನು ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಕೋರಿದ್ದಾರೆ. ಈ ಘೋರ ಕೃತ್ಯ ಎಸಗಿದವರ ವಿರುದ್ಧ ಯಾರೇ ತಪ್ಪಿತಸ್ಥರನ್ನೂ ಬಿಡುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದೇನೆ. ಕೆಲವು ಸಮಾಜ ವಿರೋಧಿ ಶಕ್ತಿಗಳಿಂದ ಹರಡುತ್ತಿರುವ ವದಂತಿಗಳಿಗೆ ಜನರು ಕಿವಿ ಕೊಡಬೇಡಿ. ಈ ಸೂಕ್ಷ್ಮ ವಿಚಾರದ ಬಗ್ಗೆ ವದಂತಿ ಹಬ್ಬಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಮಾನ್ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!