Thursday, June 1, 2023

Latest Posts

ಅಣ್ಣನಿಂದಲೇ ಗರ್ಭ ಧರಿಸಿದ ಬಾಲಕಿ: ಗರ್ಭಪಾತಕ್ಕೆ ಕೇರಳ ಹೈಕೋರ್ಟ್‌ ಅನುಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ.

ಗರ್ಭಪಾತ ಮಾಡಿಸಲು ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಏಕ ಸದಸ್ಯ ಪೀಠದ ನ್ಯಾ. ಜಿಯಾದ್‌ ರೆಹಮಾನ್‌ ಅವರು ಗರ್ಭಪಾತ ಮಾಡಿಸಲು ಅನುಮತಿ ನೀಡಿದರು.

ಗರ್ಭಪಾತಕ್ಕೆ ಅನುಮತಿ ನೀಡದೆ ಹೋದರೆ ಸಾಮಾಜಿಕ ವ್ಯವಸ್ಥೆ ಹಾಗೂ ಬಾಲಕಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿತು. 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಸಾಮಾಜಿಕ ವ್ಯವಸ್ಥೆ ಹಾಗೂ ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಹೋದರನಿಂದಲೇ ಮಗು ಜನಿಸಿದೆ ಎಂಬ ಅಂಶವು ಹಲವು ಸಾಮಾಜಿಕ ಹಾಗೂ ವೈದ್ಯಕೀಯ ಬಿಕ್ಕಟ್ಟು, ಗೊಂದಲಗಳಿಗೆ ಕಾರಣವಾಗುತ್ತದೆ. ಇಂತಹ ಸಂದರ್ಭದಲ್ಲಿ ಗರ್ಭಪಾತಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಸಮಂಜಸವಾಗಿದೆ ಎಂದು ನ್ಯಾಯಮೂರ್ತಿ ಜಿಯಾದ್‌ ರೆಹಮಾನ್‌ ಸ್ಪಷ್ಟಪಡಿಸಿದರು.

ಗರ್ಭ ಧರಿಸಿ 32 ವಾರದ ನಂತರ ಗರ್ಭಪಾತ ಮಾಡುವುದು ಗರ್ಭವತಿಯ ಆರೋಗ್ಯದ ದೃಷ್ಟಿಯಿಂದ ಕಷ್ಟಸಾಧ್ಯವಾದ ಕಾರಣ, ಶೀಘ್ರದಲ್ಲಿಯೇ ಗರ್ಭಪಾತ ಮಾಡಿಸಿ ಎಂದು ಕೂಡ ಕೋರ್ಟ್‌ ಸೂಚಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!