ಯಾವ ಬಟ್ಟೆ ಧರಿಸಬೇಕೆಂಬುದನ್ನು ಹೆಣ್ಣುಮಕ್ಕಳೇ ನಿರ್ಧರಿಸಬೇಕು, ಬೇರೆ ಯಾರೂ ಅಲ್ಲ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಡುಗಿಯರು ಯಾವ ಬಟ್ಟೆ ಧರಿಸಬೇಕು ಎಂಬುದನ್ನು ಅವರೇ ನಿರ್ಧರಿಸಬೇಕೇ ಹೊರತು ಬೇರೆ ಯಾರೂ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಹುಲ್ ಅಲಿಗಢ ವಿಶ್ವವಿದ್ಯಾಲಯಕ್ಕೆ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು.

ಶಿಕ್ಷಣ, ಹಕ್ಕುಗಳು, ಅಭಿವ್ಯಕ್ತಿಯಂತಹ ವಿಷಯಗಳ ಕುರಿತು ಮಾತನಾಡಿದರು. ಆ ಸಮಯದಲ್ಲಿ ವಿದ್ಯಾರ್ಥಿಯೊಬ್ಬ ರಾಹುಲ್ ಗಾಂಧಿಗೆ, “ನೀವು ಈ ದೇಶದ ಪ್ರಧಾನಿಯಾದರೆ, ಹುಡುಗಿಯರ ಹಿಜಾಬ್ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಹುಡುಗಿಯರು ಏನು ತೊಡಬೇಕು ಎಂಬುದನ್ನು ನಿರ್ಧರಿಸುತ್ತಾರೆಯೇ ಹೊರತು ಬೇರೆ ಯಾರೂ ಅಲ್ಲ. ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!