ಪಾಕಿಸ್ತಾನದ ದುಸ್ಸಾಹಸಕ್ಕೆ ಮುಲಾಜಿಲ್ಲದೆ ಉತ್ತರ ನೀಡಿ: ಸೇನೆಗಳಿಗೆ ಪ್ರಧಾನಿ ಮೋದಿ ಹುಕುಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಿಂದ ಗುಂಡು ಬಂದರೆ, ಭಾರತದಿಂದ ಬಾಂಬ್ ಹೋಗಲಿದೆ ಎಂದು ಪ್ರಧಾನಿ ಮೋದಿ ಸೇನೆಗೆ ಸೂಚನೆ ನೀಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದ ಜಾರಿಯಾಗಿದ್ದರೂ ಆಪರೇಷನ್ ಸಿಂದೂರ್‌ ಇನ್ನೂ ಮುಗಿದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.ಪಾಕಿಸ್ತಾನದ ಯಾವುದೇ ದುಸ್ಸಾಹಸಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಶಸ್ತ್ರ ಪಡೆಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರಧಾನಿ ಮೋದಿ ಸೇನೆಗೆ ಪಾಕ್‌ನ ಗುಂಡಿನ ದಾಳಿಗೆ ಕ್ಷಿಪಣಿ ಮೂಲಕ ಉತ್ತರಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದರ ವರದಿ ಮಾಡಿದೆ.

ಪಾಕಿಸ್ತಾನ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಮೇ 7ರಂದು ದಾಳಿ ನಡೆಸಿದ ನಂತರ ಭಾರತದ ಕಠಿಣ ನಿಲುವು ತಾಳಿದ್ದು, ಪಾಕಿಸ್ತಾನ ದಾಳಿ ನಡೆಸಿದೆ ಭಾರತವೂ ಪ್ರತಿದಾಳಿ ನಡೆಸಲಿದೆ, ಪಾಕಿಸ್ತಾನ ನಿಲ್ಲಿಸಿದರೆ, ಭಾರತವೂ ಸುಮ್ಮನಾಗಲಿದೆ. ಈ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ದೆಹಲಿಯು ಇಸ್ಲಾಮಾಬಾದ್ ಜತೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಮೂಲಕ ಮಾತ್ರ ಮಾತುಕತೆ ನಡೆಸಲಿದೆ ಎಂದು ತಿಳಿಸಿದ್ದಾಗಿ ಮೂಲಗಳು ವರದಿ ಮಾಡಿವೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ಮುಂದುವರಿಸಲು ನಿರ್ಧರಿಸಿದರೆ ಅದರೊಂದಿಗೆ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದೂ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!