ಡಾ.ಶಿವಕುಮಾರ್ ಶ್ರೀಗಳಿಗೆ ಭಾರತ ರತ್ನ ನೀಡಿ: ರಾಜನಾಥ್ ಸಿಂಗ್ ಗೆ ಡಿ.ಕೆ.ಶಿವಕುಮಾರ್ ಮನವಿ

ಹೊಸದಿಗಂತ ವರದಿ, ತುಮಕೂರು:

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳ 118ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕೆಂದು ರಾಜನಾಥ್ ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದರು.

ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ , ವಸತಿ ನೀಡುವ ಮೂಲಕ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುತ್ತಿದ್ದಾರೆ. ಮಠದಲ್ಲಿ ನಡೆಯುತ್ತಿರುವ ಅನ್ನ ದಾಸೋಹ ಪ್ರೇರೇಪಿತರಾದ ಹಿಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದರು. ನಾನು ಆಗ ಸಚಿವನಾಗಿದ್ದೆ ಎಂದು ಸ್ಮರಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!