Thursday, October 6, 2022

Latest Posts

ಮಗುವಿಗೆ ಜನ್ಮ ನೀಡಿ ಪೊದೆಯಲ್ಲಿ ಎಸೆದ ಕಾಲೇಜ್ ಹುಡುಗಿ: 10 ನೇ ಕ್ಲಾಸ್ ವಿದ್ಯಾರ್ಥಿ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕಡಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ 11ನೇ ತರಗತಿಯ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ಶಾಲೆ ಬಳಿಯ ಪೊದೆಯಲ್ಲಿ ಶಿಶು ಎಸೆದು ಹೋಗಿದ್ದಾಳೆ. ಈ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ.
ಮತ್ತೊಂದೆಡೆ 16 ವರ್ಷದ ಬಾಲಕಿ ಗರ್ಭಧರಿಸಲು ಕಾರಣನಾದ ಹತ್ತನೇ ತರಗತಿ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಪೊದೆಯಲ್ಲಿ ನವಜಾತ ಶಿಶುವಿನ ಶವವನ್ನು ಕಂಡು ಸಹಾಯಕ ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ. ನಂತರ, ಪೊಲೀಸ್ ತಂಡ ಶಾಲೆಗೆ ಧಾವಿಸಿ, ಮೃತ ಮಗು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಚಿದಂಬರಂನ ಕಾಮರಾಜ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದೆ. ಶಾಲೆಯ ವಿದ್ಯಾರ್ಥಿನಿಯೊಬ್ಬಳು ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಮಗುವಿಗೆ ಜನ್ಮ ನೀಡಿ ಪೊದೆಗೆ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿ ತನಿಖೆ ಕೈಗೊಂಡಿದ್ದಾರೆ. ತನಿಖೆಯ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿ ಪೊದೆಗಳಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಗ್ರಾಮದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ಗೆಳೆಯ ತನ್ನ ಗರ್ಭಕ್ಕೆ ಕಾರಣ ಎಂದು ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಬಾಲಕನ ವಿರುದ್ಧ ಕೇಸ್ ದಾಖಲಿಸಿ, ಬಂಧಿಸಲಾಗಿದೆ. ಬಾಲಕನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಆತನನ್ನು ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಕಾಮರಾಜ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!