ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಷ್ಟು ಕಾಲ ಸಹಿಸಿದ್ದೇವೆ ಇನ್ನುಮುಂದೆ ಸಹಿಸಲು ಆಗಲ್ಲ. ಪಕ್ಷ ಸಂಘಟನೆಗೆ ಯತ್ನಾಳ್ ಸಹಕಾರ ಕೊಡಲಿ. ಇಲ್ಲದಿದ್ದರೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಯತ್ನಾಳ್ ಬಣದ ರಾಜಕೀಯದ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್ ಸಮ್ಮುಖದಲ್ಲಿ ವಿಜಯೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ವಿಚಾರವನ್ನು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.