ಹೊಸದಿಗಂತ ವರದಿ, ಹುಬ್ಬಳ್ಳಿ:
ಪ್ರಧಾನ ಮಂತ್ರಿ ಸ್ವನಿ ಯೋಜನೆ ಮುಖ್ಯ ಉದ್ದೇಶ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಭಿಯಾಗಿ ಬದುಕುವುದಾಗಿದ್ದು, ಇನ್ನೂ ಮುಂದೆ ಡಿಜಿಟಲ್ ಪಾವತಿಗೂ ಹೆಚ್ಚು ಆದ್ಯತೆ ನೀಡಬೇಕು ಎಂದು ಪಿ.ಎಂ.ಸ್ವನಿ ಯೋಜನೆಯ ರಾಜ್ಯ ಸಂಚಾಲಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಹೇಳಿದರು.
ಇಲ್ಲಿಯ ಸವಾಯಿ ಗಂಧರ್ವ ಭವನದಲ್ಲಿ ಮಂಗಳವಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿ ಅಡಿ ದಿನಪತ್ರಿಕೆ ಹಂಚಿಕೆದಾರರು ಹಾಗೂ ಹಾಲು ಮಾರಾಟಗಾರರಿಗೆ ಪಿಎಂ ಸ್ವನಿ ಯೋಜನೆ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದ ೧೮ ಜಿಲ್ಲೆಗಳ ೫೧೦೭ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ವಿವಿಧ ಎಂಟು ವಿವಿಧ ಯೋಜನೆಗಳನ್ನು ಇದಕ್ಕೆ ಜೋಡಿಸಲಾಗುತ್ತದೆ. ಅಷ್ಟೇ ಅಲ್ಲದೇ ನೋಂದಣಿ ಅವಯನ್ನು ಸಹ ೨೦೨೪ ಡಿಸೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.