ಹೊಸದಿಗಂತ ದಿಗಂತ ವರದಿ:
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹನಿಕೆ ಗ್ರಾ.ಪಂ. ವ್ಯಾಪ್ತಿಯ ಹೊನ್ನೇನಹಳ್ಳಿ ಕಾವಲು ಗ್ರಾಮದಲ್ಲಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಹಿನ್ನಲೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸದ್ದಾರೆ.
ಬೇಲೂರು ತಾಲ್ಲೂಕಿನ, ಹನಿಕೆ ಗ್ರಾ.ಪಂ. ವ್ಯಾಪ್ತಿಯ ಹೊನ್ನೇನಹಳ್ಳಿ ಕಾವಲು ಮತಗಟ್ಟೆ ಸಂಖ್ಯೆ 47 ರಲ್ಲಿ ಚುನಾವಣೆ ಬಹಿಷ್ಕಾರ ಮಾಡಿದ್ದು, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಯಾವುದೇ ಸೌಕರ್ಯ ಕಲ್ಪಿಸದಿರುವುದಕ್ಕೆ ಆಕ್ರೋಶ ಹೊರಹಾಕಿ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದಾರೆ.
ಹೊನ್ನೇನಹಳ್ಳಿ ಕಾವಲು ಗ್ರಾಮದಲ್ಲಿ ಸುಮಾರು 65 ಕುಟುಂಬಗಳಿದ್ದು, ಗ್ರಾಮಸ್ಥರು ಮಹಿಳೆಯರ ಖಾಲಿ ಕೊಡ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.