Saturday, October 4, 2025

ನ್ಯಾಯ ಕೊಡಿ ಇಲ್ಲವೇ ದಯಾಮರಣ ಕೊಡಿ: ರಾಷ್ಟ್ರಪತಿಗೆ ಉದಯ ಜೈನ್ ಮೊರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನನ್ನ ಹೆಸರು ವಿನಾ ಕಾರಣ ಎಳೆದು ತಂದು ಸಮಾಜದಲ್ಲಿ ತಲೆಎತ್ತದ ಸ್ಥಿತಿ ನಿರ್ಮಾಣವಾಗಿದೆ. ಒಂದಾ ನನಗೆ ನ್ಯಾಯ ಕೊಡಿಸಿ ಇಲ್ಲವೇ ದಯಾಮರಣಕ್ಕೆ ಅವಕಾಶ ನೀಡಿ ಎಂದು ಉದಯ್ ಕುಮಾರ್ ಜೈನ್ ಎಂಬವರು ರಾಷ್ಟ್ರಪತಿಗಳಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 13 ವರ್ಷಗಳಿಂದ ಈ ಪ್ರಕರಣದಲ್ಲಿ ನನ್ನನ್ನು ಎಳೆತರಲಾಗುತ್ತಿದೆ. ಈ ಪ್ರಕರಣದ ಸಿಐಡಿ, ಸಿಬಿಐ ತನಿಖೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿಲ್ಲ. ನಾನು ನಿರ್ದೋಷಿ ಎಂದು ಸಾಬೀತುಪಡಿಸಲು ಮಂಪರು ಪರೀಕ್ಷೆ ಕೂಡ ಮಾಡಿಸಿದ್ದೇನೆ. ಆದರೂ ನನ್ನ ಹೆಸರು ಪ್ರಸ್ತಾಪವಾಗುತ್ತಿದೆ ಹೀಗಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ.