ಐದು ವರ್ಷ ಸ್ವತಂತ್ರ ಸರ್ಕಾರ ಕೊಡಿ, ಎಲ್ಲಾ ಅಕ್ರಮಗಳು ಅಂತ್ಯವಾಗುತ್ತೆ: ಎಚ್.ಡಿ. ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜಕೀಯ ಅಸೂಯೆಯಿಂದ ಹೆಜ್ಜೆ– ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನನ್ನು ಬಿಡುತ್ತಿಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರದ ಅಕ್ರಮ, ಅಧಿಕಾರ ದುರುಪಯೋಗಗಳ ಬಗ್ಗೆ ಟನ್‌ಗಟ್ಟಲೇ ದಾಖಲೆಗಳಿವೆ. ಆದರೆ, ಇಂದಿನ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲದಂತಾಗಿದೆ. ದಾಖಲೆಗಳಿರುವ ಕಾರಣದಿಂದಲೇ ರಾಜ್ಯ ಸರ್ಕಾರ ನನ್ನ ಮೇಲೆ ಯುದ್ಧ ಶುರು ಮಾಡಿದೆ ಎಂದು ಹೇಳಿದರು.

ತೆರಿಗೆಯ ಭಾರದಿಂದ ಜನ ನಲುಗಿ ಹೋಗಿದ್ದಾರೆ. ಒಂದು ಬಾರಿ ಐದು ವರ್ಷಗಳ ಸ್ವತಂತ್ರ ಸರ್ಕಾರ ಕೊಡಿ. ಎಲ್ಲರನ್ನು ನೋಡಿದ್ದೀರಿ, ನನಗೂ ಒಂದು ಅವಕಾಶ ಕೊಡಿ. ಎಲ್ಲ ಅಕ್ರಮಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!